ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ ಇಂದು 101 ಬಲಿ : 8023 ಕ್ಕೇರಿದ ಸಾವಿನ ಸಂಖ್ಯೆ
ಬೆಂಗಳೂರು : ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ ಇಂದು 101 ಜನರು ಬಲಿಯಾಗಿದ್ದು, ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 8023 ಕ್ಕೇರಿದೆ.
ಹೌದು, ರಾಜ್ಯದಲ್ಲಿ ಕೊರೊನಾ ಸೋಂಕು ತಾಂಡವವಾಡುತ್ತಿದ್ದು, ಇಂದು 101 ಜನರು ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 8023 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಇಂದು 32 ಮಂದಿ ಸೋಂಕಿತರು ಬಲಿಯಾಗಿದ್ದು, ಇದುವರೆಗೆ ಬೆಂಗಳೂರಿನಲ್ಲಿ ಮೃತಪಟ್ಟ ಸೋಂಕಿತರ ಸಂಖ್ಯೆ 2657 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟವಾಗಿದ್ದು, ಇಂದು 8191 ಜನರಿಗೆ ಕೊರೊನಾ ಸೋಂಕು ಧೃಡವಾಗಿದೆ, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 519537 ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 811 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
0 التعليقات: