Tuesday, 15 September 2020

ಕರ್ನಾಟಕದಲ್ಲಿ ಕೊರೋನಕ್ಕೆ 97 ಬಲಿ ಬೆಂಗಳೂರು 3084 ಸೇರಿ ರಾಜ್ಯದಲ್ಲಿ 7576 ಮಂದಿಗೆ ಪೊಸಿಟಿವ್

 


ಕರ್ನಾಟಕದಲ್ಲಿ ಕೊರೋನಕ್ಕೆ 97 ಬಲಿ ಬೆಂಗಳೂರು 3084 ಸೇರಿ ರಾಜ್ಯದಲ್ಲಿ 7576 ಮಂದಿಗೆ ಪೊಸಿಟಿವ್

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. ಇಂದು 7,576 ಮಂದಿ ಕೊರೋನಾಗೆ ತುತ್ತಾಗಿದ್ದರೆ 97 ಮಂದಿ ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,75,265ಕ್ಕೇರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 97 ಮಂದಿ ಮೃತಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,481ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 41 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 97 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,084 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,76,712ಕ್ಕೆ ಏರಿಕೆಯಾಗಿದೆ.

ಇಂದು 7,406 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,69,299ಕ್ಕೆ ಏರಿಕೆಯಾಗಿದೆ. 98,536 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 


SHARE THIS

Author:

0 التعليقات: