Friday, 25 September 2020

BIG BREAKING : ಗಾನ ಗಂಧರ್ವ `ಎಸ್.ಪಿ. ಬಾಲಸುಬ್ರಹ್ಮಣ್ಯಂ' ಇನ್ನಿಲ್ಲ

 

BIG BREAKING : ಗಾನ ಗಂಧರ್ವ `ಎಸ್.ಪಿ.     ಬಾಲಸುಬ್ರಹ್ಮಣ್ಯಂ' ಇನ್ನಿಲ್ಲಚೆನ್ನೈ : ಕರೋನ ಸೊಂಕಿನಿಂದ ಬಳಲುತ್ತಿದ್ದ ಬಹು ಭಾಷಾ ನಟ, ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಚನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಅವರ ಶ್ವಾಸಕೋಶವು ತೀವ್ರ ಪ್ರಮಾಣದಲ್ಲಿ ಏರುಪೇರು ಉಂಟಾದ ಪರಿಣಾಮ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.

ಕೊರೋನಾ ವೈರಸ್ ಕಾರಣ ಆಗಸ್ಟ್ 5 ರಂದು ಎಸ್ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ದಿನದಿಂದ ದಿನಕ್ಕೆ ಅವರ ಆರೋಗ್ಯ ಹದೆಗೆಟ್ಟಿದ್ದರಿಂದ ಆಗಸ್ಟ್ 13 ರ ಬಳಿಕ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.


SHARE THIS

Author:

0 التعليقات: