Friday, 18 September 2020

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಸಚಿವ ಸ್ಥಾನಕ್ಕೆ ಹರ್‌ಸಿಮ್ರತ್‌ ಕೌರ್ ರಾಜೀನಾಮೆ

 


ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಸಚಿವ ಸ್ಥಾನಕ್ಕೆ ಹರ್‌ಸಿಮ್ರತ್‌ ಕೌರ್ ರಾಜೀನಾಮೆ


ದೆಹಲಿ: ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಸಚಿವೆ ಹರ್‌ಸಿಮ್ರತ್‌ ಕೌರ್ ಬಾದಲ್ ಗುರುವಾರ ಮೋದಿ ಸಂಪುಟ ತ್ಯಜಿಸಿದ್ದಾರೆ.ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರದಿಂದ ಆಹಾರ ಸಂಸ್ಕರಣ ಖಾತೆ ಸಚಿವೆ, ಶಿರೋಮಣಿ ಅಕಾಲಿ ದಳದ ನಾಯಕಿ ಹರ್‌ಸಿಮ್ರತ್‌ ಕೌರ್‌ ಬಾದಲ್‌ ರಾಜೀನಾಮೆ ನೀಡಿದ್ದಾರೆ. ಕೌರ್ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ (ಸೆಪ್ಟೆಂಬರ್ 18, 2020) ಸ್ವೀಕರಿಸಿರುವುದಾಗಿ ವರದಿ ತಿಳಿಸಿದೆ.

ಹರ್ ಸಿಮ್ರತ್ ಕೌರ್ ರಾಜೀನಾಮೆಯಿಂದ ಸ್ಥಾನ ತೆರವಾದ ನಿಟ್ಟಿನಲ್ಲಿ ಆಹಾರ ಸಂಸ್ಕರಣ ಖಾತೆಯ ಹೆಚ್ಚುವರಿ ಹೊಣೆಯನ್ನು ನರೇಂದ್ರ ಸಿಂಗ್ ತೋಮರ್ ವಹಿಸಿಕೊಳ್ಳಬೇಕೆಂದು ರಾಷ್ಟ್ರಪತಿ ನಿರ್ದೇಶನ ನೀಡಿದ್ದಾರೆ.

ಕೇಂದ್ರದ ರೈತ ವಿರೋಧಿ ಕ್ರಮವನ್ನು ವಿರೋಧಿಸಿ ಸಚಿವೆ ಹರ್‌ಸಿಮ್ರತ್‌ ಕೌರ್‌ ಸಂಪುಟವನ್ನು ತೊರೆಯುವುದಾಗಿ ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಲೋಕಸಭೆಯಲ್ಲಿ ಘೋಷಿಸಿದ ಬೆನ್ನಲ್ಲೇ ಹರ್‌ಸಿಮ್ರತ್‌ ಕೌರ್‌ ತಮ್ಮ ರಾಜೀನಾಮೆಯನ್ನು ಮೋದಿ ಅವರಿಗೆ ಸಲ್ಲಿಸಿದ್ದಾರೆ.

ಪಕ್ಷದ ವಕ್ತಾರ ಹರ್‌ಚರಣ್‌ ಬೈನ್ಸ್‌ ಅವರು ಈ ವಿಚಾರವನ್ನೂ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕೇಂದ್ರವು ಸಂಸತ್ತಿನಲ್ಲಿ ಮಂಡಿಸಿದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಅವರು ಕೇಂದ್ರ ಸಚಿವ ಸಂಪುಟದಿಂದ ಹೊರಬಂದಿದ್ದಾರೆ ಎಂದು ಹರ್‌ಚರಣ್‌ ತಿಳಿಸಿದ್ದಾರೆ.

ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕಾ ಸಚಿವರಾದ ಕೌರ್ ಅವರು ಮೋದಿ ಸರ್ಕಾರದಲ್ಲಿದ್ದ ಏಕೈಕ ಶಿರೋಮಣಿ ಅಕಾಲಿದಳ ಪ್ರತಿನಿಧಿಯಾಗಿದ್ದರು.

'ಕೇಂದ್ರದ ರೈತ ವಿರೋಧಿ ಶಾಸನಗಳನ್ನು ವಿರೋಧಿಸಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರೈತರು, ಮಕ್ಕಳು ಮತ್ತು ಸೋದರಿಯರ ಪರವಾದ ನನ್ನ ನಿಲುವಿನ ಬಗ್ಗೆ ನನಗೆ ಹೆಮ್ಮೆ ಇದೆ,' ಎಂದು ಹರ್‌ಸಿಮ್ರತ್‌ ಕೌರ್‌ ಟ್ವೀಟ್‌ ಮಾಡಿದ್ದಾರೆ.

2019ರಲ್ಲಿ 2ನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ ಮೋದಿ ನೇತೃತ್ವದ ಸರಕಾರದಿಂದ ರಾಜೀನಾಮೆ ನೀಡುತ್ತಿರುವ ಮೊದಲ ಸಚಿವೆ ಕೌರ್‌.

Dailyhunt


SHARE THIS

Author:

0 التعليقات: