Tuesday, 15 September 2020

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ;ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ


 ನಿರುದ್ಯೋಗಿಗಳಿಗೆ ಸಿಹಿ ಸುದ್ದಿ;ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು(15.09.2020): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅನುಷ್ಟಾನಗಳಿಸುತ್ತಿರುವ Cluster Facilitation project ಅಡಿಯಲ್ಲಿ GIS, NRM, Livelihood(CFP) ಪರಿಣತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಯಚೂರು, ದೇವದುರ್ಗ, ಯಾದಗಿರಿ, ಸುರಪುರ, ಚಿಂಚೊಳಿ ಈ ತಾಲೂಕಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯಸ್ಸಿನಿಂದ ಗರಿಷ್ಠ 45 ವರ್ಷದೊಳಗಿನವರಾಗಿರಬೇಕು.  ಮತ್ತು ಆಯಾ ತಾಲೂಕಿನಲ್ಲಿಯೇ ಕೆಲಸ ಮಾಡಬೇಕು, ಇದರಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲ.  ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಚೆನ್ನಾಗಿ ಗೊತ್ತಿರಬೇಕು, ಗುತ್ತಿಗೆ ಅವಧಿಯು ಯೋಜನೆಯ ಅಂತ್ಯದೊಳಗೆ ಮುಗಿಯುತ್ತದೆ. ತಂಡದಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಇರಬೇಕು.

ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ನಿಗದಿತ ವಿದ್ಯಾರ್ಹತೆಯಲ್ಲಿ ಹೆಚ್ಚು ಅಂಕ ಗಳಿಸಿದ ಹಾಗೂ ಅನುಭವವುಳ್ಳ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ನೇಮಕಾತಿ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಯ ನಮೂನೆಗಾಗಿ https://rdpr.karnataka.gov.in/ ಭೇಟಿ ನೀಡಬಹುದು. ಸೆಪ್ಟಂಬರ್ 21 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ.  ಅರ್ಜಿ ನಮೂನೆಗಳನ್ನು ಮೇಲೆ ನೀಡಲಾಗಿರುವ ವೆಬ್ ಸೈಟ್ ಮೂಲಕ ಡೌನ್ ಲೋಡ್ ಮಾಡಿಕೊಂಡು  ಮುಂದಿನ ಲಿಂಕ್ ಬಳಸಿ, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು www.mgnregakarnataka.com/jobs ಅರ್ಜಿ ನಮೂನೆಗಳನ್ನು ಭರ್ತಿ ಮಾಡಿ, ತಮ್ಮ ಸಹಿಯೊಂದಿಗೆ careers.cfp@gmail.com ಗೂ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22342163ಗೆ ಸಂಪರ್ಕಿಸಬಹುದು


SHARE THIS

Author:

0 التعليقات: