ಕೊಡಗಿನಲ್ಲಿ ವರುಣ ಆರ್ಭಟ; ಕರಡಿಗೂಡು ಗ್ರಾಮಸ್ಥರಿಗೆ ಪ್ರವಾಹ ಭೀತಿ
ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕರಡಿಗೂಡು ಗ್ರಾಮದ ಜನರಿಗೆ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.
ಜಿಲ್ಲೆಯ ಎಲ್ಲೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಕಳೆದ ಆಗಸ್ಟ್ ತಿಂಗಳಿನಲ್ಲಿ ಉಂಟಾದ ಪ್ರವಾಹದಲ್ಲಿ ವಿರಾಜಪೇಟೆ ತಾಲೂಕಿನ ಕರಡಿಗೂಡು ಗ್ರಾಮ ಜಲಾವೃತಗೊಂಡಿತ್ತು. ಈಗ ಮತ್ತೆ ಜಿಲ್ಲೆಯಲ್ಲಿ ಎಡಬಿಡದೇ ಮಳೆ ಸುರಿಯುತ್ತಿದ್ದು, ಜನರಿಗೆ ಪ್ರವಾಹ ಆತಂಕ ಎದುರಾಗಿದೆ.
0 التعليقات: