ಕರ್ನಾಟಕ ಬಂದ್ : ಇಂದು ನಡೆಯಬೇಕಿದ್ದ ಕರ್ನಾಟಕ ವಿವಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ವಿಧೇಯಕಗಳನ್ನು ವಿರೋಧಿಸಿ, ರಾಜ್ಯದ ವಿವಿಧ ರೈತಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ
ಈ ಹಿನ್ನೆಲೆ ಕರ್ನಾಟಕ ವಿವಿಯ ಇಂದು ನಡೆಯಬೇಕಿದ್ದ, ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಿದ ದಿನಾಂಕವನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಕರ್ನಾಟಕ ವಿವಿಯಿಂದ ಆದೇಶ ಹೊರಡಿಸಲಾಗಿದೆ.
ಇಂದು ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯಾಧ್ಯಂತ ಎಲ್ಲಾ ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ನೀಡಲಿದೆ ಎನ್ನಲಾಗಿದೆ.
ಸೋಮವಾರ ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರ : ಸಾರ್ವಜನಿಕ ಆಸ್ತಿಗೆ ಹಾನಿಯಾದ್ರೆ ಕಠಿಣ ಕ್ರಮ
0 التعليقات: