Tuesday, 20 October 2020

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ : 9 ಜಿಲ್ಲೆಗಳಲ್ಲಿ `ಯೆಲ್ಲೋ’ ಅಲರ್ಟ್ ಘೋಷಣೆ

 ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ : 9 ಜಿಲ್ಲೆಗಳಲ್ಲಿ `ಯೆಲ್ಲೋ’ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರುದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

   ರಾಜ್ಯದ ವಿವಿಧ ಜಿಲ್ಲೆಗಲ್ಲಿ ಅ.23 ರ ವರೆಗೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 21 ಹಾಗೂ ಅ.22 ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ತುಮಕೂರು, ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಯಲ್ಲಿ ಅ.23 ರವರೆಗೂ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


SHARE THIS

Author:

0 التعليقات: