Saturday, 17 October 2020

ಕೊನೆಯ ಓವರ್ ನಲ್ಲಿ ಸಿಕ್ಸರ್ ಸುರಿಮಳೆಗೈದ ಅಕ್ಸರ್: ಚೆನ್ನೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

 

ಕೊನೆಯ ಓವರ್ ನಲ್ಲಿ ಸಿಕ್ಸರ್ ಸುರಿಮಳೆಗೈದ ಅಕ್ಸರ್: ಚೆನ್ನೈ   ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ಹೊಸದಿಲ್ಲಿ: ಚೆನ್ನೈ ಸೂಪರ್ ಕಿಂಗ್ಸ್ ನೀಡಿದ್ದ 179 ರನ್ ಗಳ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಜಯಭೇರಿ ಬಾರಿಸಿದೆ. ಕೊನೆಯ ಓವರ್ ನಲ್ಲಿ ಅಕ್ಸರ್ ಪಟೇಲ್ ಸಿಡಿಸಿದ 3 ಸಿಕ್ಸರ್ ಗಳ ನೆರವಿನಿಂದ ಡೆಲ್ಲಿ ಗೆಲುವಿನ ನಗೆ ಬೀರಿದೆ.


ಡೆಲ್ಲಿ ಕ್ಯಾಪಿಟಲ್ಸ್ ಪರ ಶಿಖರ್ ಧವನ್ 58 ಎಸೆತಗಳಲ್ಲಿ 101 ರನ್ ಸಿಡಿಸಿದರು. ಇದರಲ್ಲಿ 1 ಸಿಕ್ಸರ್ ಮತ್ತು 14 ಬೌಂಡರಿಗಳು ಸೇರಿತ್ತು. ಕೊನೆಯ ಓವರ್ ನಲ್ಲಿ ಮಿಂಚಿದ ಅಕ್ಸರ್ ಪಟೇಲ್ 5 ಎಸೆತಗಳಲ್ಲಿ 3 ಸಿಕ್ಸರ್ ಗಳೊಂದಿಗೆ 21 ರನ್ ಸಿಡಿಸಿದರು.


ಸಿಎಸ್ ಕೆ ಪರ ಡು ಪ್ಲೆಸಿಸ್ 47 ಎಸೆತಗಳಲ್ಲಿ 58 ರನ್ ಗಳಿಸಿದರೆ, ಅಂಬಾಟಿ ರಾಯುಡು 25 ಎಸೆತಗಳಲ್ಲಿ 45 ರನ್ ಸಿಡಿಸಿದರು.SHARE THIS

Author:

0 التعليقات: