ಪದವಿ ಪ್ರವೇಶ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ದಾವಣಗೆರೆ : ದ್ವಿತೀಯ ಪಿಯುಸಿ ಅಂಕಪಟ್ಟಿ ವಿತರಣೆಯ ವಿಳಂಬದ ಕಾರಣದಿಂದಾಗಿ ದಾವಣಗೆರೆ ವಿಶ್ವವಿದ್ಯಾಲಯವು ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.
ವಿದ್ಯಾರ್ಥಿಗಳು ದಾವಣಗೆರೆ ವಿವಿ ಅಧೀನದ ಕಾಲೇಜುಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಕ್ಕೆ 2020 ರ ನವೆಂಬರ್ 7 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹಿಂದೆ ಪದವಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 23 ಕೊನೆಯ ದಿನವಾಗಿತ್ತು.
ವಿದ್ಯಾರ್ಥಿಗಳು ದಂಡ ಶುಲ್ಕ ಸಹಿತ ಪ್ರವೇಶ ಅರ್ಜಿ ಸಲ್ಲಿಸಲು ಅ.29 ಕೊನೆಯ ದಿನವಾಗಿತ್ತು. ಆದರೆ ಪ್ರಸ್ತುತ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳು ಮತ್ತು ಕಾಲೇಜು ಪ್ರಾಚಾರ್ಯರ ಮನವಿಯ ಮೇರೆಗೆ ಪ್ರವೇಶ ಅರ್ಜಿ ಸ್ವೀಕಾರಕ್ಕೆ ಅವಧಿ ವಿಸ್ತರಿಸಲಾಗಿದೆ.
0 التعليقات: