Wednesday, 18 November 2020

ಡಿ.1ರ 'ರಾಜ್ಯಸಭಾ ಉಪ ಚುನಾವಣೆ'ಗೆ ಬಿಜೆಪಿ ಅಭ್ಯರ್ಥಿಯಾಗಿ ಡಾ.ಕೆ.ನಾರಾಯಣ ನಾಮಪತ್ರ ಸಲ್ಲಿಕೆ


 ಡಿ.1ರ 'ರಾಜ್ಯಸಭಾ ಉಪ ಚುನಾವಣೆ'ಗೆ ಬಿಜೆಪಿ ಅಭ್ಯರ್ಥಿಯಾಗಿ ಡಾ.ಕೆ.ನಾರಾಯಣ ನಾಮಪತ್ರ ಸಲ್ಲಿಕೆ

ಬೆಂಗಳೂರು : ಇತ್ತೀಚಿಗೆ ಕೋವಿಡ್-19 ನಿಂದ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಂದ ತೆರವಾದ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕೆ.ನಾರಾಯಣ್ ಅವರು ಇಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಅಶೋಕ್ ಗಸ್ತಿ ನಿಧನದಿಂದಾಗಿ ತೆರವಾಗಿದ್ದಂತ ರಾಜ್ಯದ 1 ರಾಜ್ಯಸಭಾ ಸ್ಥಾನಕ್ಕೆ ಚುನಾವಣಾ ಆಯೋಗವು ಡಿಸೆಂಬರ್ 1ಕ್ಕೆ ಉಪ ಚುನಾವಣೆ ಘೋಷಣೆ ಮಾಡಿತ್ತು. ಇಂತಹ ರಾಜ್ಯಸಭಾ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆಯ ದಿನವಾಗಿತ್ತು. ಇಂತಹ ಸಂದರ್ಭದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಡಾ.ಕೆ.ನಾರಾಯಣ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟಿಲ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ತೋಟಗಾರಿಕೆ ಸಚಿವ ನಾರಾಯಣ ಗೌಡ, ಶಾಸಕರಾದ ಸುನಿಲ್ ಕುಮಾರ್ ಅವರು ಉಪಸ್ಥಿತರಿದ್ದರು.


SHARE THIS

Author:

0 التعليقات: