`12 ಸಾವಿರ ರೂ. ಗೌರವ ಧನ' : ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ
ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಸಚಿವ ಸುಧಾಕರ್ ಅವರು ಸಿಹಿಸುದ್ದಿಯೊಂದನ್ನು ನೀಡಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವಧನ ನೀಡುವ ಸಂಬಂಧ ಶೀಘ್ರವೇ ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾರೆ.
ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವ ಧನ ನೀಡಬೇಕೆಂಬ ಬಹುದಿನಗಳ ಬೇಡಿಕೆ ಈಡೇರಿಲ್ಲ.ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಸಚಿವ ಸುಧಾಕರ್ ಅವರನ್ನು ರಾಜ್ಯ ಸಂಯುಕ್ತ ಕಾರ್ಯಕರ್ತೆಯರ ಸಂಘ ಒತ್ತಾಯಿಸಿದೆ. ಇದಕ್ಕೆ ಸ್ಪಂದಿಸಿರುವ ಸಚಿವ ಸುಧಾಕರ್, ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವ ಧನ ನೀಡುವ ಸಂಬಂಧ ಶೀಘ್ರವೇ ಮಹತ್ವದ ಸಭೆ ಕರೆಯುವುದಾಗಿ ಸಂಘಕ್ಕೆ ಭರವಸೆ ನೀಡಿದ್ದಾರೆ.
0 التعليقات: