ಶಾಕಿಂಗ್ ನ್ಯೂಸ್ : ರಾಜ್ಯದಲ್ಲಿ ಕಾಲೇಜು ಆರಂಭವಾದ ನಾಲ್ಕೇ ದಿನಕ್ಕೆ 123 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು
ಬೆಂಗಳೂರು : ರಾಜ್ಯದಲ್ಲಿ ಕಾಲೇಜು ಆರಂಭದ ಬೆನ್ನಲ್ಲೇ ಬಿಗ್ ಶಾಕ್ ಎದುರಾಗಿದ್ದು, ನಾಲ್ಕು ದಿನದಲ್ಲೇ 123 ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ರಾಜ್ಯಾದ್ಯಂತ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳು ಪುನಾರಂಭಗೊಂಡಿದ್ದು, ನಿನ್ನೆ ಒಂದೇ ದಿನ ರಾಜ್ಯದಲ್ಲಿ 60 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈಮೂಲಕ ಒಟ್ಟಾರೆ ಸೋಂಕಿಗೆ ತುತ್ತಾದ ವಿದ್ಯಾರ್ಥಿಗಳ ಸಂಖ್ಯೆ 123 ಕ್ಕೆ ಏರಿಕೆಯಾಗಿದೆ ಕಾಲೇಜು ಆರಂಭವಾದ ನಾಲ್ಕು ದಿನದಲ್ಲಿ ಒಟ್ಟಾರೆ 163 ವಿದ್ಯಾರ್ಥಿಗಳು, ಸಿಬ್ಬಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಸರ್ಕಾರದ ಸೂಚನೆಯಂತೆ ಕಾಲೇಜಿಗೆ ಆಗಮಿಸುವ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಕಾಲೇಜು ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಪ್ರಮಾಣ ಪತ್ರ ಕಡ್ಡಾಯಗೊಳಿಸಲಾಗಿದೆ.
0 التعليقات: