Wednesday, 25 November 2020

ಮುಂಬೈ ಉಗ್ರರ ದಾಳಿಗೆ 12 ವರ್ಷ : ಸರಳ ಸಮಾರಂಭದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಕೆ


 ಮುಂಬೈ ಉಗ್ರರ ದಾಳಿಗೆ 12 ವರ್ಷ : ಸರಳ ಸಮಾರಂಭದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಕೆ


ಮುಂಬೈ: ಮುಂಬೈ ಮೇಲೆ ಉಗ್ರರ ದಾಳಿ ನಡೆದು ಇಂದಿಗೆ 12 ವರ್ಷವಾಗಿದ್ದು, ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲು ನಗರ ಪೊಲೀಸರು ಸರಳ ಕಾರ್ಯಕ್ರಮ ಆಯೋಜಿಸಿದ್ದಾರೆ.

ದಕ್ಷಿಣ ಮುಂಬೈನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹೊಸದಾಗಿ ನಿರ್ಮಿಸಲಾದ ಸ್ಮಾರಕವೊಂದರಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯಲಿದ್ದು, ಕೊರೊನಾ ಸೋಂಕಿನ ಕಾರಣಕ್ಕೆ ಕಡಿಮೆ ಮಂದಿ ಭಾಗವಹಿಸಲಿದ್ದಾರೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಾರಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಗೃಹ ಸಚಿವ ಅನಿಲ್ ದೇಶ್​ಮುಖ್​, ಡಿಜಿಪಿ ಸುಬೋಧ್ ಕುಮಾರ್ ಜೈಸ್ವಾಲ್, ಮುಂಬೈ ಪೊಲೀಸ್ ಆಯುಕ್ತ ಪರಮ್ ಬೀರ್​ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಹುತಾತ್ಮರಿಗೆ ಗೌರವ ಸಲ್ಲಿಸಲಿದ್ದಾರೆ.

ನವೆಂಬರ್ 26, 2008ರಂದು ಪಾಕಿಸ್ತಾನದಿಂದ ಹತ್ತು ಮಂದಿ ಲಷ್ಕರ್-ಎ-ತೋಯ್ಬಾ ಭಯೋತ್ಪಾದಕರು ಸಮುದ್ರ ಮಾರ್ಗವಾಗಿ ಬಂದು ಮುಂಬೈ ಮೇಲೆ ದಾಳಿ ಮಾಡಿದ್ದರು. ಈ ದಾಳಿಯಲ್ಲಿ 18 ಮಂದಿ ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಸಾವನ್ನಪ್ಪಿದರು.SHARE THIS

Author:

0 التعليقات: