Thursday, 19 November 2020

1,849 ಹೊಸ ಪ್ರಕರಣ, 26 ಸೋಂಕಿತರು ಸಾವು

 

1,849 ಹೊಸ ಪ್ರಕರಣ, 26 ಸೋಂಕಿತರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1,849 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, 26 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 8,67,780ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 11,604ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 1,048 ಹೊಸ ಪ್ರಕರಣಗಳು ವರದಿಯಾಗಿವೆ. ಹೀಗಾಗಿ ನಗರದಲ್ಲಿ 3,60,587 ಜನರಿಗೆ ಸೋಂಕು ತಗುಲಿದಂತಾಗಿದೆ. ಇದರಲ್ಲಿ 3,38,688 ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ 4,042 ಸೋಂಕಿತರು ಮೃತಪಟ್ಟಿದ್ದು, ಇನ್ನೂ 17,856 ಪ್ರಕರಣಗಳು ಸಕ್ರಿಯವಾಗಿವೆ.

ಇಂದು ಒಟ್ಟು 1,800 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ 8,67,780 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 25,169 ಪ್ರಕರಣಗಳು ಸಕ್ರಿಯವಾಗಿವೆ. ಇದರಲ್ಲಿ 598 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


SHARE THIS

Author:

0 التعليقات: