24 ಗಂಟೆಗಳಲ್ಲಿ 45,674 ಮಂದಿಗೆ ಕೊರೋನಾ..!
ನವದೆಹಲಿ, ನ.8- ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಮತ್ತೆ ಶುರುವಾಗಿದೆ. ಕಳೆದ 24 ಗಂಟೆಗಳಲ್ಲಿ 45,674 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಒಟ್ಟಾರೆ ದೇಶಾದ್ಯಂತ ಸೋಂಕಿತರ ಸಂಖ್ಯೆಯಲ್ಲೀಗ 85 ಲಕ್ಷ ದಾಟಿದ್ದು ಸಾವಿನ ಸಂಖ್ಯೆ 1,26,121 ಎಂದು ತಿಳಿಸಲಾಗಿದೆ.78 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದು , ಎಲ್ಲೆಡೆ ಈಗ ಜಾಗೃತಿ ಅಭಿಯಾನಗಳು ಶುರುವಾಗಿದೆ.
ಇನ್ನೊಂದು ತಿಂಗಳಲ್ಲಿ ಲಸಿಕೆ ಸಿಗುವ ಆಶಾಭಾವನೆ ನಡುವೆ ಈಗ ಆಯುರ್ವೇದ ಹಾಗೂ ಇತರೆ ರೋಗ ನಿರೋಧಕ ಶಕ್ತಿ ಹೆಚ್ಚುವ ಔಷಧಗಳನ್ನು ರೋಗಿಗಳಿಗೆ ನೀಡುತ್ತಿದ್ದು , ಇದರಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದು ಸಮಾಧಾನಕರ ಸಂಗತಿ ಎಂದು ತಜ್ಞ ವೈದ್ಯರು ಹೇಳುತ್ತಿದ್ದಾರೆ.
ತಮಿಳುನಾಡು ಹಾಗೂ ಆಂಧ್ರದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಅಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಉತ್ತರ ಭಾರತದಲ್ಲೂ ಕೂಡ ಚಳಿಗಾಲ ಸಮೀಪಿಸುತ್ತಿರುವುದರಿಂದ ಮುನ್ನೆಚ್ಚರಿಕೆಯಾಗಿ ಹಲವು ಕ್ರಮಗಳನ್ನು ಜರುಗಿಸುವುದು ಅನಿವಾರ್ಯ ಎಂದು ಮತ್ತು ಜನರ ಓಡಾಟಕ್ಕೆ ಕಡಿವಾಣ ಹಾಕಬೇಕು ಎಂದು ಸಲಹೆ ನೀಡಲಾಗಿದೆ.
0 التعليقات: