Wednesday, 4 November 2020

ಕರ್ನಾಟಕದಲ್ಲಿ ಮತ್ತೆ ಏರಿಕೆಯಾಯ್ತು ಕೊರೋನಾ: ಇಂದು 3,377 ಸೋಂಕು ಪತ್ತೆ, 8,045 ಡಿಸ್ಚಾರ್ಜ್!

 

ಕರ್ನಾಟಕದಲ್ಲಿ ಮತ್ತೆ ಏರಿಕೆಯಾಯ್ತು ಕೊರೋನಾ: ಇಂದು 3,377 ಸೋಂಕು ಪತ್ತೆ, 8,045 ಡಿಸ್ಚಾರ್ಜ್!

ನಿನ್ನೆಗೆ ಹೋಲಿಸಿದರೆ ರಾಜ್ಯದಲ್ಲಿ ಕೊರೋನಾ ವೈರಸ್ ಏರಿಕೆಯಾಗಿದ್ದು ಇಂದು 3,377 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,35,773ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ನಿನ್ನೆಗೆ ಹೋಲಿಸಿದರೆ ರಾಜ್ಯದಲ್ಲಿ ಕೊರೋನಾ ವೈರಸ್ ಏರಿಕೆಯಾಗಿದ್ದು ಇಂದು 3,377 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,35,773ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 34 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,281ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು 8,045 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 7,88,780ಕ್ಕೆ ಏರಿಕೆಯಾಗಿದೆ. 35,693 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1,953 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,43,507ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 16 ಮಂದಿ ಸಾವನ್ನಪ್ಪಿದ್ದಾರೆ.


SHARE THIS

Author:

0 التعليقات: