Sunday, 15 November 2020

ಇಂದು 7 ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ


 ಇಂದು 7 ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್     ಕುಮಾರ್ ಪ್ರಮಾಣವಚನ

ಪಟ್ನಾ : ಸತತ ನಾಲ್ಕನೇ ಅವಧಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಅಕ್ಟೋಬರ್ 28 ರಿಂದ ಮೂರು ಹಂತಗಳಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ನೇತೃತ್ವದ ಎನ್ ಡಿಎ ಒಕ್ಕೂಟ ಭರ್ಜರಿ ಜಯಗಳಿಸಿ ಅಧಿಕಾರದ ಗದ್ದುಗೆ ಹಿಡಿದಿದೆ. ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನು ಅವಿರೋಧವಾಗಿ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ.

ಇಂದು ನಿತೀಶ್ ಕುಮಾರ್ ಸತತ ನಾಲ್ಕನೇ ಬಾರಿಗೆ ಮತ್ತು ಒಟ್ಟಾರೆಯಾಗಿ 7 ನೇ ಬಾರಿಗೆ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ 4.30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಫಗು ಚೌಹಾಣ್ ನೂತನ ಸಿಎಂಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.SHARE THIS

Author:

0 التعليقات: