Monday, 9 November 2020

ಗುಜರಾತ್ ಉಪ ಚುನಾವಣೆ: 8 ಕ್ಷೇತ್ರಗಳಲ್ಲಿ 7ರಲ್ಲಿ ಬಿಜೆಪಿಗೆ ಮುನ್ನಡೆ

 

ಗುಜರಾತ್ ಉಪ ಚುನಾವಣೆ: 8 ಕ್ಷೇತ್ರಗಳಲ್ಲಿ 7ರಲ್ಲಿ ಬಿಜೆಪಿಗೆ ಮುನ್ನಡೆ

ಗಾಂಧಿನಗರ, ನವೆಂಬರ್ 10: ಗುಜರಾತ್‌ನಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಬಿಜೆಪಿ 7 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. 10.30ರವರೆಗೆ ಬಿಜೆಪಿಯು ಶೇ.53.13ರಷ್ಟು ಮತವನ್ನು ಪಡೆದಿದೆ.

 ಬಿಹಾರದ 117 ವಿಧಾನಸಭಾ ಕ್ಷೇತ್ರಗಳಲ್ಲಿ ಎನ್ ಡಿಎ ಮುನ್ನಡೆ

ಭಾರತೀಯ ನ್ಯಾಷನಲ್ ಕಾಂಗ್ರೆಸ್ ಶೇ.35.1ರಷ್ಟು ವೋಟ್ ಶೇರ್ ಪಡೆದಿದೆ. ನವೆಂಬರ್ 3 ರಂದು ಗುಜರಾತ್‌ನ 8 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ.

ಬಿಹಾರದಲ್ಲಿ ಎನ್‌ಡಿಎ ಹಾಗೂ ಮಹಾಘಟಬಂಧನ್ ಮೈತ್ರಿ ನಡುವೆ ಬಿರುಸಿನ ಸ್ಪರ್ಧೆ ನಡೆಯುತ್ತಿದೆ.

ವಿವಿಧ ರಾಜ್ಯಗಳ ಉಪ ಚುನಾವಣೆಗಳಲ್ಲಿ ಮಾತ್ರ ಬಿಜೆಪಿ ಭಾರಿ ಮುನ್ನಡೆ ಸಾಧಿಸುತ್ತಿದೆ. ಗುಜರಾತ್, ಉತ್ತರ ಪ್ರದೇಶ, ಮಧ್ಯಪ್ರದೇಶ, ತೆಲಂಗಾಣ, ಮಣಿಪುರ, ಕರ್ನಾಟಕ ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು, ಬಳಿಕ ಅದರಲ್ಲಿ ಐವರು ಬಿಜೆಪಿಗೆ ಸೇರಿದ್ದರು, ಇದೀಗ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೂಡ ಪಡೆದಿದ್ದರು


SHARE THIS

Author:

0 التعليقات: