Thursday, 12 November 2020

87 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 500ಕ್ಕೂ ಹೆಚ್ಚು ಜನ ಬಲಿ


 87 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 500ಕ್ಕೂ ಹೆಚ್ಚು ಜನ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 44,878 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 87,28,795ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 547 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,28,688ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,84,547 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 81,15,580 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 49,079 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 11,39,230 ಜನರಲ್ಲಿ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 12,31,01,739 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.


SHARE THIS

Author:

0 التعليقات: