BBMP ಮಾಜಿ ಮೇಯರ್ `ಸಂಪತ್ ರಾಜ್' ಅರೆಸ್ಟ್
ಬೆಂಗಳೂರು : ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ರಾತ್ರಿ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುಮಾರು ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಸಂಪತ್ ರಾಜ್ ನನ್ನು ಬಂಧಿಸಲಾಗಿದೆ.
ಅ. 1 ರಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ, ಪೊಲೀಸ್ ಠಾಣೆಯಲ್ಲಿ ಗಲಾಟೆ, ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಪ್ರಚೋದನೆ ನೀಡಿದ ಅರೋಪದ ಮೇಲೆ ಸಿಸಿಬಿ ಪೊಲೀಸರು ಬಂಧಿಸಿದ್ದರು, ಇಂದು ಕೋರ್ಟ್ ಗೆ ಹಾಜರುಪಡಿಸಿ ವಿಚಾರಣೆಗಾಗಿ ವಶಕ್ಕೆ ಪಡೆಯಲಿದ್ದಾರೆ ಎನ್ನಲಾಗಿದೆ.
0 التعليقات: