ಬೆಂಗಳೂರು: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ
ಬೆಂಗಳೂರು, ನ.10: ಬೆಂಗಳೂರಿನ ಬಾಪೂಜಿ ನಗರದ ಗುಡ್ಡದಹಳ್ಳಿ ಒಂದನೇ ಕ್ರಾಸ್ ನಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ್ದು, ಕ್ಷಣ ಮಾತ್ರದಲ್ಲಿ ಕಾರ್ಖಾನೆ ಬೆಂಕಿಗೆ ಆಹುತಿಯಾಗಿದೆ. ಈ ವೇಳೆ ಕೆಲವೊಂದು ವಾಹನಗಳು ಸುಟ್ಟು ಭಸ್ಮವಾಗಿವೆ.
ಮಂಗಳವಾರ ಈ ಘಟನೆ ನಡೆದಿದ್ದು, ದಟ್ಟ ಹೊಗೆ ಕಾಣಿಸಿಕೊಂಡಿದೆ. ಈ ಕೆಮಿಕಲ್ ಕಾರ್ಖಾನೆ ಜನನಿಬಿಡ ಪ್ರದೇಶದಲ್ಲೇ ಇದ್ದು, ಆತಂಕದ ವಾತಾವರಣ ಮನೆ ಮಾಡಿದೆ.
ಕಾರ್ಖಾನೆಯಲ್ಲಿ ಅಗ್ನಿ ಅಪಘಡ ಸಂಭವಿಸಿದ ವೇಳೆ ಒಳಗೆ ನಾಲ್ಕು ಜನ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಸಿಲಿಂಡರ್ ಬ್ಲಾಸ್ಟ್ ಆಗುತ್ತಿದ್ದಂತೆ ಅವರು ಕಾರ್ಖಾನೆಯಿಂದ ಹೊರಗೆ ಓಡಿ ಬಂದಿದ್ದಾರೆ ಎನ್ನಲಾಗಿದೆ.
ಇನ್ನೂ, ಬೆಂಕಿಯ ಕೆನ್ನಾಲಿಗೆಗೆ ಅಕ್ಕಪಕ್ಕದ ಮನೆಗಳೂ ಆಹುತಿಯಾಗಿದ್ದು, ಕೂಡಲೇ ಸ್ಥಳಕ್ಕೆ ದಾವಿಸಿರುವ 9 ಅಗ್ನಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ
0 التعليقات: