ಸಿಎಂ ರಾಜಕೀಯ ಕಾರ್ಯದರ್ಶಿ `ಎನ್.ಆರ್. ಸಂತೋಷ್' ಆತ್ಮಹತ್ಯೆಗೆ ಯತ್ನ!
ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಸದ್ಯ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಡಾಲರ್ಸ್ ಕಾಲೋನಿಯಲ್ಲಿ ಅವರ ನಿವಾಸದಲ್ಲಿ ರಾತ್ರಿ 8 ಗಂಟೆ ಸುಮಾರಿಗೆ 12 ನಿದ್ರೆ ಮಾತ್ರೆ ಸೇವಿಸಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ಕೂಡಲೇ ಇದನ್ನು ಗಮನಿಸಿದ ಅವರ ಪತ್ನಿ ಸಮೀಪದ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಸಂತೋಷ್ ಅವರನ್ನು ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
0 التعليقات: