Monday, 9 November 2020

ಕೊರೋನಾ ನಿಯಮ ಉಲ್ಲಂಘನೆ : ಸಂಸದ ತೇಜಸ್ವಿ ಸೂರ್ಯ, ಮಾಜಿ ಸಿಎಂ ಸಿದ್ದರಾಮಯ್ಯ, ಸಂಸದ ಡಿಕೆ ಸುರೇಶ್ ಹಾಗೂ ನಟ ದರ್ಶನ್ ಗೆ ಕೋರ್ಟ್ ಫೈನ್

 

ಕೊರೋನಾ ನಿಯಮ ಉಲ್ಲಂಘನೆ : ಸಂಸದ ತೇಜಸ್ವಿ ಸೂರ್ಯ, ಮಾಜಿ ಸಿಎಂ ಸಿದ್ದರಾಮಯ್ಯ, ಸಂಸದ ಡಿಕೆ ಸುರೇಶ್ ಹಾಗೂ ನಟ ದರ್ಶನ್ ಗೆ ಕೋರ್ಟ್ ಫೈನ್

ಬೆಂಗಳೂರು : ಕೊರೋನಾ ಸೋಂಕಿನ ಮಾರ್ಗಸೂಚಿ ನಿಯಮಗಳನ್ನು ಉಪ ಚುನಾವಣೆ ಸಂದರ್ಭದಲ್ಲಿ ಉಲ್ಲಂಘಿಸಿದಂತ ಮಾಜಿ ಸಿಎಂ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ ಹಾಗೂ ನಟ ದರ್ಶನ್ ಅವರಿಗೆ ತಲಾ 250 ರೂಪಾಯಿ ದಂಡವನ್ನು ವಿಧಿಸಿ, ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ.

ರಾಜರಾಜೇಶ್ವರಿನಗರ ಉಪ ಚುನಾವಣೆಯ ಪ್ರಚಾರದ ವೇಳೆ ಮಾರ್ಗಸೂಚಿ ನಿಯಮ ಉಲ್ಲಂಘಿಸಿಲಾಗಿದೆ. ಮಾರ್ಗಸೂಚಿ ನಿಯಮ ಉಲ್ಲಂಘಿಸಿದ್ದರ ಬಗ್ಗೆ 18 ಎನ್ ಸಿ ಆರ್ ದಾಖಲಾಗಿದೆ ಎಂಬುದಾಗಿ ವಕೀಲರಾದ ಪುತ್ತಿಗೆ ರಮೇಶ್, ಜಿಆರ್ ಮೋಹನ್ ಅವರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಪಿಐಎಲ್ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಂತ ಹೈಕೋರ್ಟ್ ವಿಭಾಗೀಯ ಪೀಠವು, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ನಟ ದರ್ಶನ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಂಸದ ಡಿಕೆ ಸುರೇಶ್ ಅವರಿಗೆ ತಲಾ 250ರೂಪಾಯಿ ದಂಡ ವಿಧಿಸಿದೆ. ಅಲ್ಲದೇ ಅರ್ಜಿಯ ವಿಚಾರಣೆಯನ್ನು ನವೆಂಬರ್ 11ಕ್ಕೆ ಹೈಕೋರ್ಟ್ ಮುಂದೂಡಿಕೆ ಮಾಡಿದೆ


SHARE THIS

Author:

0 التعليقات: