ಕರ್ನಾಟಕ ಜಾನಪದ ವಿವಿಯಲ್ಲಿ ಪತ್ರಿಕೋದ್ಯಮ ಎಂ.ಎ ಪದವಿಗೆ ಅರ್ಜಿ ಆಹ್ವಾನ
ಗೊಟಗೋಡಿ/ಶಿಗ್ಗಾಂವಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿಯ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಯುಜಿಸಿ ಅಂಗೀಕೃತ ಯಾವುದೇ ವಿಶ್ವವಿದ್ಯಾಲಯದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರುವ ಹಾಗೂ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷಿಸುತ್ತಿರುವ ವಿದ್ಯಾರ್ಥಿಗಳು ಸಹ ಅರ್ಜಿಗಳನ್ನು ಸಲ್ಲಿಸಬಹುದು. ಆದರೆ, ಫಲಿತಾಂಶ ಪ್ರಕಟಣೆಯ ನಂತರ ಅಂಕಪಟ್ಟಿಗಳನ್ನು ಕೂಡಲೇ ಇಂಟರ್ನೆಟ್ ಮೂಲಕ ಪಡೆದು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಹತೆ, ಅರ್ಜಿ ನಮೂನೆ, ಪ್ರವೇಶ ಶುಲ್ಕ ಹಾಗೂ ಇತರ ಮಾಹಿತಿಗಳನ್ನು ವಿಶ್ವವಿದ್ಯಾಲಯದ ವಿವರಣಾ ಪುಸ್ತಕದಿಂದ ಪಡೆಯಬಹುದು ಅಥವಾ ವಿಶ್ವವಿದ್ಯಾಲಯದ ವೆಬ್ಸೈಟ್ http:www.janapadauniversity.ac.in ನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: +91 6366266465 ಇಲ್ಲಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.
0 التعليقات: