Monday, 30 November 2020

ರಜನಿಕಾಂತ್ ರಾಜಕೀಯ ಪ್ರವೇಶ ಇನ್ನೂ ಅಸ್ಪಷ್ಟ: ಶೀಘ್ರವೇ ನಿರ್ಧಾರ ಪ್ರಕಟ ಎಂದ ಸೂಪರ್ ಸ್ಟಾರ್


 ರಜನಿಕಾಂತ್ ರಾಜಕೀಯ ಪ್ರವೇಶ ಇನ್ನೂ ಅಸ್ಪಷ್ಟ: ಶೀಘ್ರವೇ ನಿರ್ಧಾರ ಪ್ರಕಟ ಎಂದ ಸೂಪರ್ ಸ್ಟಾರ್

ಚೆನ್ನೈ: ನಟ ರಜನಿ ಕಾಂತ್ ಅವರ ರಾಜಕೀಯ ಪ್ರವೇಶ ಕುರಿತಂತೆ ಇನ್ನೂ ಅವರ ನಿರ್ಧಾರ ಅನಿಶ್ಚಿತತೆಯಿಂದ ಕೂಡಿದೆ. ಇಂದು ನಡೆದ ರಜಿನಿ ಮಕ್ಕಳ್ ಮಂಡ್ರಮ್ ನ ಜಿಲ್ಲಾ ಕಾರ್ಯದರ್ಶಿಗಳ ಸಭೆಯಲ್ಲಿ ಯಾವುದೇ ನಿರ್ದಾರ ಕೈಗೊಳ್ಳಲಾಗಲಿಲ್ಲ, ಹೀಗಾಗಿ ಸಭೆ ಅಂತ್ಯವಾಯಿತು.

ಪೋಯಸ್ ಗಾರ್ಡನ್ ನಲ್ಲಿ ನಡೆದ ಸಭೆಯ ನಂತರ ಮಾತನಾಡಿದ ರಜನಿಕಾಂತ್, ಜಿಲ್ಲಾ ಕಾರ್ಯದರ್ಶಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ, ಹಾಗೂ ನಾನು ನನ್ನ ನಿಲುವನ್ನು ತಿಳಿಸಿದ್ದೇನೆ, ನಾನು ಯಾವುದೇ ನಿರ್ಧಾರ ತೆಗೆದುಕೊಂಡರು ಆ ನಿರ್ಧಾರಕ್ಕೆ ಅವರು ಬದ್ಧರಾಗಿರುವುದಾಗಿ ತಿಳಿಸಿದ್ದಾರೆ. ಹಿಗಾಗಿ ನಾನು ಶೀಘ್ರವೇ ಒಂದು ನಿರ್ಧಾರಕ್ಕೆ ಬರುವುದಾಗಿ ತಿಳಿಸಿದ್ದಾರೆ.

ಕೋಡಂಬಕ್ಕಂನ ರಾಘವೇಂದ್ರ ಮಂಟಪದಲ್ಲಿ ಸಮಾಲೋಚನಾ ಸಭೆ ನಡೆಯಿತು. ಒಟ್ಟು 36 ಜಿಲ್ಲಾ ಕಾರ್ಯದರ್ಶಿಗಳನ್ನು ನಟ ಆಹ್ವಾನಿಸಿದ್ದರು. ಸೂಚನೆ ಪ್ರಕಾರ ಬೆಳಗ್ಗೆ 9 ಗಂಟೆಗೆ ಕಾರ್ಯದರ್ಶಿಗಳು ಹಾಜರಾಗಿದ್ದರು.

ಕೊರೋನಾ ಪರೀಕ್ಷೆಗಾಗಿ ಥರ್ಮಲ್ ಸ್ಕ್ಯಾನಿಂಗ್ ಮತ್ತು ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳನ್ನು ಅನುಸರಿಸಿದ ನಂತರ ಎಲ್ಲಾ ಜಿಲ್ಲಾ ಕಾರ್ಯದರ್ಶಿಗಳನ್ನು ಮಂಟಪಕ್ಕೆ ಬಿಡಲಾಯಿತು.

ರಜನಿಕಾಂತ್ 9.45ಕ್ಕೆ ಮಂಟಪಕ್ಕೆ ಆಗಮಿಸಿದರು, ಬೆಳಗ್ಗೆ 10 ಗಂಟೆಗೆ ಸಭೆ ಆರಂಭವಾಯಿತು, ಎಲ್ಲಾ ಜಿಲ್ಲಾ ಕಾರ್ಯದರ್ಶಿಗಳು ನಟನ ಆರೋಗ್ಯದ ಬಗ್ಗೆ ಟ್ವೀಟ್ ಮಾಡಿದ ನಂತರ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು.

ನನ್ನ ಹೆಸರಿನಲ್ಲಿ ಪತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಅದು ನನ್ನದಲ್ಲ ಎಂದು ಎಲ್ಲರಿಗೂ ತಿಳಿದಿದೆ. ಆದರೆ, ನನ್ನ ಆರೋಗ್ಯದ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿರುವ ವಿವರಗಳು ನಿಜ. ನನ್ನ ರಾಜಕೀಯ ನಿಲುವಿನ ಬಗ್ಗೆ ಸೂಕ್ತ ಸಂದರ್ಭದಲ್ಲಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ.


SHARE THIS

Author:

0 التعليقات: