Thursday, 19 November 2020

ಕುತೂಹಲ ಕೆರಳಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ-ಸಿ.ಟಿ. ರವಿ ಭೇಟಿ


 ಕುತೂಹಲ ಕೆರಳಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ-ಸಿ.ಟಿ. ರವಿ ಭೇಟಿ

ಬೆಂಗಳೂರು : ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಭೇಟಿ ನೀಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಬುಧವಾರ ಸಚಿವ ಸಂಪುಟ ಸಭೆ ಬೆನ್ನಲ್ಲೇ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಿಎಸ್ ವೈ ದೆಹಲಿಗೆ ತೆರಳಿದ್ದರು. ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದೀಗ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿವಾಸ ಕಾವೇರಿಗೆ ಸಿ.ಟಿ ರವಿ ಭೇಟಿ ನೀಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಈಗಾಗಲೇ ಬಿಜೆಪಿಯಲ್ಲಿ ಹಲವು ಶಾಸಕರು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಒತ್ತಡ ಹೇರಿದ್ದಾರೆ. ಈ ನಡುವೆ ಸಿ.ಟಿ ರವಿ ಅವರು ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.


SHARE THIS

Author:

0 التعليقات: