ಬಿಹಾರ ಗದ್ದುಗೆ ಗೆದ್ದ ಎನ್ಡಿಎ: ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿ
ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶವು ಮತಗಟ್ಟೆ ಸಮೀಕ್ಷೆಯ ಎಲ್ಲ ಅಂದಾಜುಗಳನ್ನು ಸುಳ್ಳಾಗಿಸಿ ಮತ್ತೆ ಎನ್ಡಿಎಗೆ ಅಧಿಕಾರ ನೀಡಿದೆ. ಇದರೊಂದಿಗೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸತತ ನಾಲ್ಕನೇ ಅವಧಿಗೆ ಸ್ಥಾನ ಉಳಿಸಿಕೊಳ್ಳುವುದು ಖಚಿತವಾಗಿದೆ.
ಬುಧವಾರ ಮುಂಜಾನೆ ವೇಳೆಗೆ ಎಲ್ಲ 243 ಕ್ಷೇತ್ರಗಳ ಫಲಿತಾಂಶವನ್ನು ಚುನಾವಣಾ ಆಯೋಗ ಘೋಷಿಸಿದೆ. ಬಿಜೆಪಿ, ಜೆಡಿಯು ನೇತೃತ್ವದ ಎನ್ಡಿಎ 125 ಕ್ಷೇತ್ರಗಳಲ್ಲಿ ಗೆಲುವು ಪಡೆದಿದೆ. ಆರ್ಜೆಡಿ ನೇತೃತ್ವದ ಮಹಾಗಠಬಂಧನ 110 ಸ್ಥಾನಗಳನ್ನಷ್ಟೇ ಗಳಿಸಿದೆ. ಆದರೆ, 75 ಸ್ಥಾನಗಳಲ್ಲಿ ಗೆಲುವು ಪಡೆಯವ ಮೂಲಕ ಆರ್ಜೆಡಿಯು ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಎನ್ಡಿಎ ಮೈತ್ರಿಕೂಟದ ಪೈಕಿ ಬಿಜೆಪಿ 74, ಜೆಡಿಯು 43, ವಿಐಪಿ 4 ಹಾಗೂ ಎಚ್ಎಎಂ 4 ಕ್ಷೇತ್ರಗಳಲ್ಲಿ ಜಯ ಗಳಿಸಿವೆ. ಮಹಾಗಠಬಂಧನ ಪೈಕಿ ಆರ್ಜೆಡಿ 75, ಕಾಂಗ್ರೆಸ್ 19 ಹಾಗೂ ಎಡಪಕ್ಷಗಳು 16 ಸ್ಥಾನ ಗಳಿಸಿವೆ. ಉಳಿದಂತೆ ಎಐಎಂಐಎಂ 5, ಬಿಎಸ್ಪಿ 1, ಎಲ್ಜೆಪಿ 1 ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
0 التعليقات: