ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಆರಂಭ
ಮಂಗಳೂರು: ಎರಡು ದಶಕಗಳ ನಂತರ ಬಿಜೆಪಿ ರಾಜ್ಯಕಾರಿಣಿ ಮಂಗಳೂರಿನಲ್ಲಿ ಗುರುವಾರ ಬೆಳಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹಿತ ರಾಜ್ಯ ಬಿಜೆಪಿ ನಾಯಕರ ಉಪಸ್ಥಿತಿಯಲ್ಲಿ ಪ್ರಾರಂಭಗೊಂಡಿತು.
ನಗರದ ರಮಣ ಪೈ ಸಭಾಂಗಣದಲ್ಲಿ ಸಭೆ ಬೆಳಗ್ಗೆಯಿಂದ ಸಂಜೆ ವರೆಗೆ ನಡೆಯುತ್ತಿದೆ. ಇದೇ ವೇಳೆ ಪಕ್ಷದ ಕೋರ್ ಕಮಿಟಿ ಸಭೆ ಕೂಡಾ ನಡೆಯಲಿದ್ದು ಹಿರಿಯ ನಾಯಕರು ಪಾಲ್ಗೊಳ್ಳುತ್ತಾರೆ. ಬೆಳಗ್ಗೆ ಕಾರ್ಯಕಾರಿಣಿಯ ಉದ್ಘಾಟನೆಯನ್ನು ಸಿಎಂ ಯಡಿಯೂರಪ್ಪ ನೆರವೇರಿಸಿದರು. ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದರು.
ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಡಿ.ವಿ.ಸದಾನಂದ ಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಸಿ.ಟಿ.ರವಿ, ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ ಮತ್ತಿತರರು ಪಾಲ್ಗೊಂಡರು
0 التعليقات: