ರಾಜ್ಯದ ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ
ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಲಾಕ್ ಡೌನ್ ನಿಂದಾಗಿ ಸಾರ್ವಜನಿಕರಿಗೆ ಉಂಟಾದ ಅನಾನುಕೂಲತೆ ಬಗೆಹರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
0 التعليقات: