ಅರ್ನಬ್ ಗೋಸ್ವಾಮಿ ಜಾಮೀನು ಅರ್ಜಿ ತಿರಸ್ಕೃತ
ಮುಂಬೈ, ನವೆಂಬರ್ 9: ಒಳಾಂಗಣ ವಿನ್ಯಾಸಕಾರ ಅನ್ವಯ್ ನಾಯ್ಕ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ಅರ್ನಬ್ ಗೋಸ್ವಾಮಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.
2018ರಲ್ಲಿ ನಡೆದ ಅನ್ವಯ್ ನಾಯ್ಕ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ಅವರು ಮಧ್ಯಂತರ ಜಾಮೀನಿಗೆ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದರು.
ಅರ್ನಬ್ ಗೋಸ್ವಾಮಿ 70 ಕಿ.ಮೀ ದೂರದ ಜೈಲಿಗೆ ಶಿಫ್ಟ್: ಕಾರಣ ಏನು?
ಶನಿವಾರ ಸುದೀರ್ಘ ವಾದ ವಿವಾದ ಆಲಿಸಿದ್ದ ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಮತ್ತು ಎಂಎಸ್ ಕಾರ್ಣಿಕ್ ಅವರನ್ನು ಒಳಗೊಂಡ ನ್ಯಾಯಪೀಠ, ಸೋಮವಾರಕ್ಕೆ ಆದೇಶವನ್ನು ಕಾಯ್ದಿರಿಸಿತ್ತು. ಅರ್ನಬ್ ಮನವಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್, ಸಿಆರ್ಪಿಸಿ ಸೆಕ್ಷನ್ 439ರ ಅಡಿ ಜಾಮೀನು ಮನವಿ ಮಾಡಲು ಅಲಿಬಾಗ್ನ ಸೆಷನ್ಸ್ ನ್ಯಾಯಾಲಯಕ್ಕೆ ಅವರು ಅರ್ಜಿ ಸಲ್ಲಿಸಲು ಅಭ್ಯಂತರವಿಲ್ಲ ಎಂದು ಹೇಳಿದೆ.
ಬಂಧನದ ವೇಳೆ ಪೊಲೀಸರಿಂದ ಹಿಂಸೆ: ಅರ್ನಬ್ ಗೋಸ್ವಾಮಿ ಆರೋಪ
ಮಹಾರಾಷ್ಟ್ರ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿ ಹಿಂಸಿಸಿದ್ದಾರೆ ಎಂದು ಜಾಮೀನು ಅರ್ಜಿಯಲ್ಲಿ ಆರೋಪಿಸಿದ್ದ ಅರ್ನಬ್, ಕೂಡಲೇ ಜಾಮೀನು ಮಂಜೂರು ಮಾಡುವಂತೆ ಕೋರಿದ್ದರು
0 التعليقات: