'ಹೈಕೋರ್ಟ್'ನಿಂದ 'ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ' ಪಟ್ಟಿ ರದ್ದು
ಬೆಂಗಳೂರು : ಕಳೆದ ಇತ್ತೀಚಿಗಷ್ಟೇ ರಾಜ್ಯ ಸರ್ಕಾರದಿಂದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಯ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ, ಅಧಿಸೂಚನೆ ಹೊರಡಿಸಿತ್ತು. ಇಂತಹ ಅಧಿಸೂಚನೆಯನ್ನು ರದ್ದು ಪಡಿಸಿ, ಹೈಕೋರ್ಟ್ ಆದೇಶಿಸಿದೆ.
ರಾಜ್ಯ ಹೈಕೋರ್ಟ್ ರಾಜ್ಯ ಸರ್ಕಾರ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಪ್ರಕಟಿಸಿ, ಅಧಿಸೂಚನೆ ಹೊರಡಿಸಿದ್ದನ್ನು ಇಂದು ರದ್ದು ಪಡಿಸಿದೆ. ಅಲ್ಲದೇ 4 ವಾರಗಳಲ್ಲಿಯೇ ಹೊಸ ಮೀಸಲಾತಿ ಪಟ್ಟಿಯನ್ನು ಪ್ರಕಟಿಸುವಂತೆ ಆದೇಶಿಸಿದೆ.
ರಾಜ್ಯ ಸರ್ಕಾರದ ಮೀಸಲಾತಿ ಪಟ್ಟಿಯ ಅಧಿಸೂಚನೆಯಂತೆ ಇತ್ತೀಚೆಗೆ ಅನೇಕ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಪುರಸಭೆಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರನ್ನು ಆಯ್ಕೆ ಕೂಡ ಮಾಡಲಾಗಿತ್ತು. ಹೀಗೆ ಆಯ್ಕೆಗೊಂಡವರಿಗೆ ಬಿಗ್ ಶಾಕ್ ನೀಡಿದೆ.
0 التعليقات: