'ಶಾಲಾರಂಭಕ್ಕೆ ಮುನ್ನುಡಿ' ; ನಾಳೆ ವಿಧಾನಸೌಧದಲ್ಲಿ ಅಧಿಕಾರಿಗಳು, ಶಿಕ್ಷಣ ಸಚಿವರ ಜೊತೆ ಸಿಎಂ BSY ಮಹತ್ವದ ಸಭೆ
ಬೆಂಗಳೂರು : ರಾಜ್ಯದಲ್ಲಿ ಶಾಲೆ ಆರಂಭದ ಕುರಿತು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ಮಹತ್ವದ ಸಭೆ ನಡೆಯಲಿದೆ.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆ ಆಯುಕ್ತ ಅನುಬ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಆರೋಗ್ಯ ಸಚಿವರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಕೂಡ ಭಾಗವಹಿಸಲಿದ್ದಾರೆ. ಸರ್ಕಾರ ಶಾಲಾರಂಭದ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಕೊರೊನಾ ಭೀತಿಯ ನಡುವೆ ರಾಜ್ಯದಲ್ಲಿ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನವೆಂಬರ್ 17 ರಿಂದ ಕಾಲೇಜುಗಳು ಆರಂಭಗೊಂಡಿದೆ. ಆದರೆ ಶಾಲೆ ಆರಂಭಕ್ಕೆ ಮಾತ್ರ ಇನ್ನೂ ಕೂಡ ಸರ್ಕಾರ ಅನುಮತಿ ನೀಡಿಲ್ಲ. ಸೋಮವಾರ ಮಧ್ಯಾಹ್ನ 12 ಗಂಟೆಗೆ ನಗರದ ಕುಮಾರಕೃಪಾ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಶಾಲಾರಂಭದ ಕುರಿತು ಚರ್ಚೆ ನಡೆಯಲಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು ಈಗಾಗಲೇ ಆರಂಭವಾಗಿದ್ದರೂ, ವಿದ್ಯಾರ್ಥಿಗಳ ಹಾಜರಾತಿ ಶೇ.15ರಷ್ಟು ದಾಟಿಲ್ಲ.
0 التعليقات: