Saturday, 19 December 2020

ರಾಜ್ಯದಲ್ಲಿ ಜ.1ರಿಂದ 10 ಮತ್ತು 12ನೇ ತರಗತಿ ಪುನರಾರಂಭ - ಸಿಎಂ ಯಡಿಯೂರಪ್ಪ


  ರಾಜ್ಯದಲ್ಲಿ ಜ.1ರಿಂದ 10 ಮತ್ತು 12ನೇ ತರಗತಿ ಪುನರಾರಂಭ - ಸಿಎಂ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಕಾಲೇಜುಗಳ ಆರಂಭದ ನಂತ್ರ, ಶಾಲಾ-ಕಾಲೇಜು ಯಾವಾಗ ಆರಂಭಗೊಳ್ಳಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿತ್ತು. ಇಂತಹ ಕುತೂಹಲಕ್ಕೆ ತೆರೆ ಬಿದ್ದಿದ್ದು, ಕೊನೆಗೂ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಮುಹೂರ್ತ ಫಿಕ್ಸ್ ಮಾಡಲಿದ್ದಾರೆ. ಜನವರಿ 1ರಿಂದ 10ನೇ ತರಗತಿ ಹಾಗೂ 12ನೇ ತರಗತಿ ಆರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿರುವುದಾಗಿ ಘೋಷಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಸಿಎಂ ಯಡಿಯೂರಪ್ಪ, 2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ ಮಾಡಲಾಗುತ್ತಿದೆ. ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದ ಎಂಬುದಾಗಿ ಇಂದು ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.


SHARE THIS

Author:

0 التعليقات: