ಬಂಡೀಪುರ ಅರಣ್ಯದಲ್ಲಿ ಭಾರೀ ಅಗ್ನಿ ಅವಘಡ : 100 ಎಕರೆಗೂ ಹೆಚ್ಚು ಕಾಡು ಬೆಂಕಿಗಾಹುತಿ
ಚಾಮರಾಜನಗರ : ಬಂಡೀಪುರ ಅರಣ್ಯದಲ್ಲಿ ಭಾರೀ ಬೆಂಕಿ ಅಗ್ನಿ ಅವಘಡ ಸಂಭವಿಸಿದ್ದು, 100 ಎಕರೆಗೂ ಹೆಚ್ಚು ಅರಣ್ಯ ಬೆಂಕಿಗಾಹುತಿಯಾಗಿದೆ.
ಚಾಮರಾಜನಗರ ಜಿಲ್ಲೆಯ ಬಂಡೀಪುರ ವ್ಯಾಪ್ತಿಯ ಚೌಡಹಳ್ಳಿ ಬಳಿ ಇರುವ ಮೂರ್ಕಲ್ ಗುಡ್ಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅರಣ್ಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ರೇಖೆ ನಿರ್ಮಿಸುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದ್ದು, ಘಟನೆಗೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಚೌಡಹಳ್ಳಿ ಬಳಿ ಇರುವ ಮೂರ್ಕಲ್ ಗುಡ್ಡದಲ್ಲಿ ಈ ಘಟನೆ ನಡೆದಿದ್ದು, ಘಟನೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದೆ ಎನ್ನಲಾಗಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ
0 التعليقات: