Thursday, 3 December 2020

ಕಿಲ್ಲರ್ 'ಕೊರೊನಾ' ಸೋಂಕಿಗೆ ರಾಜ್ಯದಲ್ಲಿ ಇಂದು 13 ಮಂದಿ ಬಲಿ ; 11821 ಕ್ಕೆ ಏರಿದ ಸಾವಿನ ಸಂಖ್ಯೆ


ಕಿಲ್ಲರ್ 'ಕೊರೊನಾ' ಸೋಂಕಿಗೆ ರಾಜ್ಯದಲ್ಲಿ ಇಂದು 13 ಮಂದಿ ಬಲಿ ; 11821 ಕ್ಕೆ ಏರಿದ ಸಾವಿನ ಸಂಖ್ಯೆ


ಬೆಂಗಳೂರು : ಕಿಲ್ಲರ್ 'ಕೊರೊನಾ' ಸೋಂಕಿಗೆ ರಾಜ್ಯದಲ್ಲಿ ಇಂದು 13 ಮಂದಿ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 11821 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 6 ಮಂದಿ ಬಲಿಯಾಗಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಕೊರೊನಾ ಸಾವಿನ ಸಂಖ್ಯೆ 4162 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಂದು 1446 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 889113 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಸದ್ಯ 24689 ಸಕ್ರಿಯ ಪ್ರಕರಣಗಳಿದ್ದು, 299 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಇಂದು 894 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಇದುವರೆಗೆ 852584 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.


SHARE THIS

Author:

0 التعليقات: