ಕರ್ನಾಟಕದಲ್ಲಿ ಇಂದು '1321' ಪಾಸಿಟಿವ್ ಪ್ರಕರಣ ಪತ್ತೆ ; '10' ಮಂದಿ ಬಲಿ
ಬೆಂಗಳೂರು : ಕರ್ನಾಟಕದಲ್ಲಿ ಇಂದು 1321 ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 893006 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 733 ಪ್ರಕರಣ ಪತ್ತೆಯಾಗಿದೆ.
ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ 10 ಮಂದಿ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 11856 ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಇಂದು 7 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 4183 ಕ್ಕೆ ಏರಿಕೆಯಾಗಿದೆ,
ಕರ್ನಾಟಕದಲ್ಲಿ ಇಂದು 889 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 855750 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 25381 ಸಕ್ರಿಯ ಪ್ರಕರಣಗಳಿದೆ. ಐಸಿಯುನಲ್ಲಿ 280 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
0 التعليقات: