ರಾಜ್ಯದಲ್ಲಿ 'ಮತ್ತೆ ಏರಿಕೆ' ಕಂಡ ಕೊರೋನಾ ಸಂಖ್ಯೆ : ಇಂದು 1440 ಜನರಿಗೆ ಸೋಂಕು, 16 ಸೋಂಕಿತರು ಸಾವು
ಬೆಂಗಳೂರು : ರಾಜ್ಯದಲ್ಲಿ ಕಳೆದ ನಿನ್ನೆಯಿಂದ ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗಿದೆ. ಇಂದು ಹೊಸದಾಗಿ 1440 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,87,667ಕ್ಕೆ ಏರಿಕೆಯಾಗಿದೆ. ಅಲ್ಲದೇ ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ತಿಳಿಸಿದಂತೆ ಕೊರೋನಾ ಸೋಂಕಿನ ಎರಡನೇ ಅಲೆ ಜನವರಿಯಲ್ಲಿ ಆರಂಭವಾಗಲಿದೆ ಎಂಬ ಸೂಚನೆಯೂ ಕಾಣುತ್ತಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು ಹೊಸದಾಗಿ 1440 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 8,87,667ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 983 ಸೋಂಕಿತರು ಸೇರಿದಂತೆ, 8,51,690 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ, ರಾಜ್ಯದಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 24,150ಕ್ಕೆ ಬಂದು ನಿಂತಿರುವುದಾಗಿ ತಿಳಿಸಿದೆ.
ಇನ್ನೂ ಇಂದು ಬೆಂಗಳೂರು ನಗರದಲ್ಲಿ 712 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದರೇ, ಸೋಂಕಿತರಾಂದತ 10 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು ಕಿಲ್ಲರ್ ಕೊರೋನಾಗೆ 16 ಸೋಂಕಿತರು ಸಾವನ್ನಪ್ಪುವ ಮೂಲಕ, ಸಾವಿನ ಸಂಖ್ಯೆ 11,808ಕ್ಕೆ ಏರಿಕೆಯಾಗಿದೆ.
0 التعليقات: