Wednesday, 2 December 2020

ಈಶಾನ್ಯ ದೆಹಲಿ ಗಲಭೆ ಪ್ರಕರಣ ; ಉಮರ್ ಖಾಲಿದ್ ನ್ಯಾಯಾಂಗ ಬಂಧನ ಅವಧಿ ಡಿ. 16 ವರೆಗೆ ವಿಸ್ತರಣೆ


 ಈಶಾನ್ಯ ದೆಹಲಿ ಗಲಭೆ ಪ್ರಕರಣ ; ಉಮರ್ ಖಾಲಿದ್ ನ್ಯಾಯಾಂಗ ಬಂಧನ ಅವಧಿ ಡಿ. 16 ವರೆಗೆ ವಿಸ್ತರಣೆ

ನವದೆಹಲಿ : ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂ ಧ ಬಂಧನ ದಲ್ಲಿರುವ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯ ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 16 ವರೆಗೆ ವಿಸ್ತರಿಸಲಾಗಿದೆ.

ಆರೋಪಿಗಳ ವಿಚಾರಣೆ ನಡೆಸಿದ ಚೀಫ್ ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ದಿನೇಶ್ ಕುಮಾರ್ ಅವರು, ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನ ವಿಸ್ತರಿಸಿದ್ದಾರೆ. ಆರೋಪಿಯ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಲಾಯಿತು. ಆರೋಪಿಗಳ ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನ ವಿಸ್ತರಿಸಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ ಭುಗಿಲೆದ್ದ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ, ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳು ಕಾಯ್ದೆಯಡಿ ಉಮರ್ ಖಾಲಿದ್ ಅವರನ್ನು ಬಂಧಿಸಲಾಗಿತ್ತು. .SHARE THIS

Author:

0 التعليقات: