Tuesday, 1 December 2020

ಹವಾಮಾನ ಇಲಾಖೆಯಿಂದ ವಿಶೇಷ ಸೂಚನೆ : ರಾಜ್ಯದಲ್ಲಿ 2 ದಿನ ಭಾರೀ ಮಳೆ, 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್


 ಹವಾಮಾನ ಇಲಾಖೆಯಿಂದ ವಿಶೇಷ ಸೂಚನೆ : ರಾಜ್ಯದಲ್ಲಿ 2 ದಿನ ಭಾರೀ ಮಳೆ, 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್


ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಡಿಸೆಂಬರ್ 3 ರಂದು ಕನ್ಯಾಕುಮಾರಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಡಿಸೆಂಬರ್ 4 ರಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


SHARE THIS

Author:

0 التعليقات: