ಭಾರತದಲ್ಲಿ ಒಂದೇ ದಿನ 22,889 ಮಂದಿಗೆ ಕೊರೊನಾ ಸೋಂಕು
ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 22,889 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 99,79,447 ಕ್ಕೆ ಏರಿಕೆಯಾಗಿದೆ.
ಇನ್ನು ನಿನ್ನೆ ಒಂದೇ ದಿನ 338 ಮಂದಿ ಸೋಂಕಿತರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ 1,44,789 ಮಂದಿ ಸೋಂಕಿಗೆ ಬಲಿಯಾದಂತಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಪೈಕಿ 95,20,827 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3,13,831 ಸಕ್ರಿಯ ಪ್ರಕರಣಗಳಿವೆ.
0 التعليقات: