ರಾಷ್ಟ್ರ ರಾಜಧಾನಿಯಲ್ಲಿ 2.3 ರಷ್ಟು ತೀವ್ರತೆಯ ಲಘು ಭೂಕಂಪನ
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಬೆಳಗ್ಗೆ ಲಘು ಭೂಕಂಪನ ಸಂಭವಿಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.
ದೆಹಲಿಯ ನಂಗೋಲಿ ಭಾಗದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.3ರಷ್ಟು ತೀವ್ರತೆ ದಾಖಲಲಾಗಿದೆ. ಇಂದು ಮುಂಜಾನೆ 5 ಗಂಟೆ 2 ನಿಮಿಷದಲ್ಲಿ ಭೂಕಂಪನ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಮಾಹಿತಿ ನೀಡಿದೆ. ಆಸ್ತಿಪಾಸ್ತಿ ನಷ್ಟವಾದ ಮಾಹಿತಿ ಇಲ್ಲ.
0 التعليقات: