ಹವಾಮಾನ ಇಲಾಖೆಯಿಂದ ವಿಶೇಷ ಮಾಹಿತಿ : ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಡಿಸೆಂಬರ್ 12 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ಬೆಂಗಳೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಟ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.
0 التعليقات: