Thursday, 3 December 2020

ಬುರೇವಿ ಎಫೆಕ್ಟ್: ರಾಜ್ಯದಲ್ಲಿ 3 ದಿನ ಮಳೆ, ಬೀದರ್‌ನಲ್ಲಿ 9.4 ಡಿ.ಸೆ. ಕನಿಷ್ಠ ಉಷ್ಣಾಂಶ


ಬುರೇವಿ ಎಫೆಕ್ಟ್: ರಾಜ್ಯದಲ್ಲಿ 3 ದಿನ ಮಳೆ, ಬೀದರ್‌ನಲ್ಲಿ 9.4 ಡಿ.ಸೆ. ಕನಿಷ್ಠ ಉಷ್ಣಾಂಶ

ಬೆಂಗಳೂರು: ಬುರೇವಿ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುರುವಾರವೂ ಮಳೆಯಾಗಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಡಿ.4ರಿಂದ ಡಿ.6ರವರೆಗೆ ಗುಡುಗು ಮಿಂಚು ಸಹಿತ ಮಳೆಯಾದರೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದಲ್ಲಿ ಸದ್ಯ ಮೋಡ ಕವಿದ ವಾತಾವರಣ ಇರಲಿದ್ದು, ಮಳೆ ಜತೆಗೆ ಚಳಿಯೂ ಹೆಚ್ಚಳವಾಗಲಿದೆ. ಗುರುವಾರ ಬೀದರ್‌ನಲ್ಲಿ ಕನಿಷ್ಠ ಉಷ್ಣಾಂಶ 9.4, ದಾವಣಗೆರೆಯಲ್ಲಿ 11.3 ಹಾಗೂ ವಿಜಯಪುರದಲ್ಲಿ 12.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಡಿ.3ರ ರಾತ್ರಿ ಹಾಗೂ ಡಿ.4ರ ಬೆಳಗ್ಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ. ಪ್ರತಿ ಗಂಟೆಗೆ 90 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ಮಾಹಿತಿ ನೀಡಿದರು.


SHARE THIS

Author:

0 التعليقات: