Wednesday, 30 December 2020

ಗ್ರಾ.ಪಂ ಚುನಾವಣೆ: 4,228 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 2,265 ರಲ್ಲಿ ಕಾಂಗ್ರೆಸ್, 1,167 ರಲ್ಲಿ ಜೆಡಿಎಸ್ ಅಭ್ಯರ್ಥಿಗಳು ಮುನ್ನಡೆ


 ಗ್ರಾ.ಪಂ ಚುನಾವಣೆ: 4,228 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 2,265 ರಲ್ಲಿ ಕಾಂಗ್ರೆಸ್, 1,167 ರಲ್ಲಿ ಜೆಡಿಎಸ್ ಅಭ್ಯರ್ಥಿಗಳು ಮುನ್ನಡೆ

ಬೆಂಗಳೂರು: ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ನಿರ್ಣಾಯಗ ಘಟ್ಟ ತಲುಪಿದೆ. 

ಮಧ್ಯಾಹ್ನದ ವರೆಗೆ ನಡೆದಿರುವ ಮತ ಎಣಿಕೆಯಲ್ಲಿ 4,228 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿ, ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದ್ದರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 2,265 ಸ್ಥಾನಗಳಲ್ಲಿ ಗೆದ್ದು ಎರಡನೇ ಸ್ಥಾನದಲ್ಲಿದೆ. ಈ ಹಿಂದೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು 1,167 ಸ್ಥಾನಗಳನ್ನು ಗೆದ್ದಿದ್ದಾರೆ. 

ಬೆಳಗಾವಿಯಲ್ಲಿ ಮತ ಎಣಿಕೆ ಕೇಂದ್ರದ ಬಳಿ ಮಾಟ, ಮಂತ್ರ! 

ಮತದಾನಕ್ಕೂ ಮುನ್ನ ವಾಮಾಚಾರ, ಮಾಟ ಮಂತ್ರಗಳ ಬಗ್ಗೆ ಈ ಹಿಂದೆ ವರದಿ ಪ್ರಕಟವಾಗಿತ್ತು. ಆದರೆ ಈಗ ಮತ ಎಣಿಕೆ ದಿನದಂದು ಮತ ಎಣಿಕೆ ಕೇಂದ್ರದ ಎದುರು ವಾಮಾಚಾರ ನಡೆದಿರುವ ಘಟನೆ ಬೆಳಗಾವಿಯಲ್ಲಿ ವರದಿಯಾಗಿದೆ. 

ಚಿಕ್ಕೋಡಿಯಲ್ಲಿ ಈ ಘಟನೆ ನಡೆದಿದ್ದು, ಸಣ್ಣ ಪೇಪರ್ ತುಂಡು ಹಾಗೂ ವಾಮಾಚಾರಕ್ಕೆ ಬಳಕೆ ಮಾಡುವ ಪದಾರ್ಥಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


SHARE THIS

Author:

0 التعليقات: