ಆಭರಣ ಪ್ರಿಯರಿಗೆ ಬಿಗ್ ಶಾಕ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಚಿನ್ನದ ದರ 675 ಏರಿಕೆ
ನವದೆಹಲಿ : ಡಿಸೆಂಬರ್ ತಿಂಗಳ ಆರಂಭದಲ್ಲೇ ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನ ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.
ಬುಧವಾರ ಒಂದೇ ದಿನ 10 ಗ್ರಾಂ ಚಿನ್ನದ ಬೆಲೆಯಲ್ಲಿ 675 ರೂ. ಹೆಚಾಗಿದೆ. ಈ ಮೂಲಕ 10 ಗ್ರಾಂ ಚಿನ್ನದ ಬೆಲೆ 48,169 ರೂ. ಗೆ ಏರಿಕೆಯಾಗಿದೆ. ಇನ್ನೂ ಬೆಳ್ಳಿ ಬೆಲೆಯಲ್ಲೂ ಏರಿಕೆಯಾಗಿದ್ದು, ನಿನ್ನೆ ಒಂದೇ ದಿನ 1,280 ರೂ. ಏರಿಕೆಯಾಗಿ ಕೆಜಿ ಬೆಳ್ಳಿ ಬೆಲೆ 62,496 ಕ್ಕೆ ಏರಿಕೆಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆಯಾಗಿರುವುದರಿಂದ ದೇಶಿಯ ಮಾರುಕಟ್ಟೆಯಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ ಎನ್ನಲಾಗಿದೆ.
0 التعليقات: