Monday, 14 December 2020

ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕು ಸೇರ್ಪಡೆ


ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕು ಸೇರ್ಪಡೆ

ಬೆಂಗಳೂರು: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ನೂತನ ವಿಜಯನಗರ ಜಿಲ್ಲೆಯನ್ನು ರಚಿಸಿ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಜನರ ಬೇಡಿಕೆ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ವಿಜಯನಗರ ಜಿಲ್ಲೆಯನ್ನು ರಚನೆ ಮಾಡಲಾಗಿದೆ ಎನ್ನಲಾಗಿದೆ.

ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ, ಹೂವಿನಹಡಗಲಿ, ಹರಪನಹಳ್ಳಿ ತಾಲೂಕುಗಳನ್ನು ವಿಜಯನಗರ ಜಿಲ್ಲೆಗೆ ಸೇರ್ಪಡೆ ಮಾಡಲಾಗಿದೆ. ಸೋಮವಾರ ಅಧಿಸೂಚನೆ ಹೊರಡಿಸಲಾಗಿದ್ದು, ಇದರೊಂದಿಗೆ ಅಧಿಕೃತವಾಗಿ ನೂತನ ಜಿಲ್ಲೆಗೆ ಚಾಲನೆ ದೊರೆತಂತಾಗಿದೆ. ಹೊಸಪೇಟೆ ನೂತನ ವಿಜಯನಗರ ಜಿಲ್ಲಾ ಕೇಂದ್ರವಾಗಿರುತ್ತದೆ. ಪ್ರಸ್ತಾವನೆಗೆ ಸಂಬಂಧಿಸಿದಂತೆ ನಿಯಮಾನುಸಾರ ಸರ್ಕಾರ ಆಕ್ಷೇಪಣೆಗಳನ್ನು ಆಹ್ವಾನಿಸಿದೆ.



SHARE THIS

Author:

0 التعليقات: