Wednesday, 30 December 2020

`ಇ-ಸಂವೇದಾ ಕ್ಲಾಸ್' : 8,9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ


`ಇ-ಸಂವೇದಾ ಕ್ಲಾಸ್' : 8,9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದ 8,9 ಹಾಗೂ 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಭೌತಿಕ ತರಗತಿಗಳು ಆರಂಭವಾಗದೇ ಇರುವುದರಿಂದ ದೂರದರ್ಶನ ಚಂದನ ವಾಹಿನಿಯಲ್ಲಿ ಸಂವೇದಾ ಪಾಠಗಳನ್ನು ಜನವರಿ 4 ರಿಂದ ಮರು ಪ್ರಸಾರ ಮಾಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಚಂದನಾ ವಾಹಿನಿಯಲ್ಲಿ ಪ್ರಸಾರವಾದ ಪಾಠಗಳು 2021 ಜನವರಿ 1 ಕ್ಕೆ ಪೂರ್ಣಗೊಳ್ಳಲಿವೆ. ಜನವರಿ 1 ರಿಂದ 10 ನೇ ತರಗತಿಗೆ ಶಾಲಾ ತರಗತಿಗಳು ಮತ್ತು 6 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ತರಗತಿಗಳು ಆರಂಭವಾಗುತ್ತಿವೆ. ಇದರ ಜೊತೆಗೆ ಮಕ್ಕಳ ಕಲಿಕೆಯ ಹಿತದೃಷ್ಟಿಯಿಂದ ಚಂದನಾ ವಾಹಿನಿಯಲ್ಲಿ 8,9 ಮತ್ತು 10 ನೇ ತರಗತಿಗಳಿಗೆ ಪ್ರಸಾರವಾಗುತ್ತಿದ್ದ ಪಾಠಗಳನ್ನು ಜನವರಿ 4 ರಿಂದ ಮರು ಪ್ರಸಾರ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.SHARE THIS

Author:

0 التعليقات: