ಸಿಲಿಕಾನ್ ಸಿಟಿ'ಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ : ನಾಳೆ ರಾತ್ರಿ 8 ರಿಂದ ವಾಹನ ಸಂಚಾರ ನಿರ್ಬಂಧ ; ಮೇಲ್ಸೇತುವೆಗಳು ಬಂದ್
ಬೆಂಗಳೂರು : ನಾಳೆ ರಾಜ್ಯ ರಾಜಧಾನಿಯಲ್ಲಿ ನ್ಯೂಯಿರ್ ಗೆ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಹೊಸ ವರ್ಷಾಚರಣೆಯ ಹೆಸರಿನಲ್ಲಿ ಕುಡಿದು ವಾಹನ ಚಲಾಯಿಸಿದ್ರೆ ಲೈಸೆನ್ಸ್ ರದ್ದು ಆಗಲಿದೆ.
'ಹೊಸ ವರ್ಷಾಚರಣೆ ವೇಳೆ ಹೆಚ್ಚು ಜನ ಸೇರದಂತೆ ತಡೆಯಲು ನಗರದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಚರ್ಚ್ ಸ್ಟ್ರೀಟ್ಗಳಲ್ಲಿ ನಾಳೆ ರಾತ್ರಿ 8 ಗಂಟೆಯಿಂದ ಜ.1ರ ಬೆಳಿಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ' ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ.
ಮುಂಗಡ ಟಿಕೆಟ್ ಹಾಗೂ ಪಾಸ್ ಇದ್ದವರಿಗೆ ಮಾತ್ರ ರೆಸ್ಟೋರೆಂಟ್, ಪಬ್, ಪಾರ್ಟಿಗಳಿಗೆ ಅವಕಾಶ ನೀಡಲಾಗುವುದು. ನಿಷೇಧಿತ ರಸ್ತೆಗಳಲ್ಲಿ ಪಾರ್ಟಿಗಳಿಗೆ ಹೋಗುವವರು, ವಾಹನಗಳನ್ನು ಬಿಟ್ಟು, ನಡೆದು ಹೋಗಬಹುದು' ಎಂದು ಹೇಳಿದ್ದಾರೆ.
'ಹೊಸ ವರ್ಷದ ಆಚರಣೆ ವೇಳೆ ಮೋಜು ಮಾಡಲು ನೈಸ್ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಜನ ಸೇರುತ್ತಾರೆ. ಕೆಲವರು ಬೈಕ್ ರೇಸ್, ವೀಲಿಂಗ್ ಮಾಡುತ್ತಾರೆ. ಅಂತಹವರ ಮೇಲೆ ಹದ್ದಿನ ಕಣ್ಣಿಡಲಾಗಿದೆ. 191 ಕಡೆ ನಾಕಾಬಂದಿ ಹಾಕಲಾಗುವುದು.2,500ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅನಗತ್ಯವಾಗಿ ಸಂಚಾರಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದು ಎಚ್ಚರಿಸಿದರು. ನಗರ ಕೆಲ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ, ಪಾರ್ಕಿಂಗ್ ಮಾಡೋದಕ್ಕೆ ನಿಷೇಧಿಸಲಾಗಿದೆ. ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಸಂಭ್ರಮದ ಹೆಸರಿನಲ್ಲಿ ಡ್ರಿಂಕ್ ಅಂಡ್ ಡ್ರೈವ್ ಗೆ ಅವಕಾಶವಿಲ್ಲ. ಒಂದು ವೇಳೆ ಡ್ರಿಂಕ್ ಅಂಡ್ ಡ್ರೈವ್ ಮಾಡಿದ್ರೆ ಅಂತಹ ವಾಹನ ಸವಾರರ ಲೈಸೆನ್ಸ್ ರದ್ದು ಪಡಿಸಲಾಗುತ್ತದೆ. ವ್ಹೀಲಿಂಗ್ ಮಾಡೋದದನ್ನು ನಿಷೇಧಿಸಲಾಗಿದೆ ಎಂದರು.
'ನಗರದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಿರುವುದರಿಂದ ನಗರದ ಎಲ್ಲ ಮೇಲ್ಸೇತುವೆಗಳನ್ನು ಗುರುವಾರ ರಾತ್ರಿ 10ರಿಂದ ಶುಕ್ರವಾರ ಬೆಳಿಗ್ಗೆ 6 ಗಂಟೆಯವರೆಗೆ ಮುಚ್ಚಲಾಗುವುದು. ಸರ್ವೀಸ್ ರಸ್ತೆಗಳಲ್ಲಿ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ' ಎಂದು ಮಾಹಿತಿ ನೀಡಿದರು. ಕಬ್ಬನ್ ರಸ್ತೆ, ರೆಸಿಡೆನ್ಸಿ ರಸ್ತೆ, ಇಂದಿರಾನಗರ 100 ಅಡಿ ರಸ್ತೆ, ರೆಸ್ಟ್ ಹೌಸ್ ರಸ್ತೆ, ಡಿಸ್ಪೆನ್ಸರಿ ರಸ್ತೆ, ರಿಚ್ಮಂಡ್, ಇನ್ಫೆಂಟ್ರಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಮ್ಯೂಸಿಯಂ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ಮ್ಯಾಗ್ರತ್ ರಸ್ತೆ, ಕಮಿಷನರೇಟ್ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
0 التعليقات: