Sunday, 20 December 2020

ಬಿಜೆಪಿ, ಜೆಡಿಎಸ್​​ ವಿಲೀನ ಶುದ್ಧ ಸುಳ್ಳು- ಸಿಎಂ ಯಡಿಯೂರಪ್ಪ


ಬಿಜೆಪಿ, ಜೆಡಿಎಸ್​​ ವಿಲೀನ ಶುದ್ಧ ಸುಳ್ಳು- ಸಿಎಂ ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಜೆಡಿಎಸ್​ ಶೀಘ್ರವೇ ವಿಲೀನ ಆಗಲಿದೆ. ಆ ಮೂಲಕ ರಾಜ್ಯ ರಾಜಕೀಯದಲ್ಲಿ ಧ್ರುವೀಕರಣ ನಡೆಯಲಿದೆ ಎಂಬ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಬಿಎಸ್​​ ಯಡಿಯೂರಪ್ಪ ಅವರು, ಬಿಜೆಪಿ, ಜೆಡಿಎಸ್​​ ಪಕ್ಷಗಳ ವಿಲೀನ ಶುದ್ಧ ಸುಳ್ಳು ಎಂದಿದ್ದಾರೆ.

ಈ ಕುರಿತು ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿರುವ ಸಿಎಂ, ಜಾತ್ಯಾತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿಯವರು ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದು ಸರಿಯಷ್ಠೆ. ಆದರೆ ಯಾವುದೇ ಜೆ.ಡಿ.ಎಸ್. ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಬರುವುದಾಗಲೀ ಅಥವಾ ಜೆ.ಡಿ.ಎಸ್. ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸುವಂತಹ ಗೊಂದಲಗಳ ವರದಿಗಳು ಶುದ್ಧ ಸುಳ್ಳು. ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕೇವಲ ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ನಮಗೆ ಸಹಕಾರ ನೀಡುತ್ತಿದ್ದಾರೆಯೇ ವಿನ: ಮತ್ತೇನೂ ಇಲ್ಲ. ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಠವಾಗಿ ಹೇಳಿದ್ದರಿಂದ ನಾವು ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿಗೆ ತರುತ್ತಿದ್ದೇವೆ. ವಿಧಾನಸಭೆಗೆ ಚುನಾವಣೆ ಇನ್ನೂ ಎರಡೂವರೆ ವರ್ಷ ಇದೆ. ಈಗ ಮಾಧ್ಯಮಗಳಲ್ಲಿ ಬರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ.



SHARE THIS

Author:

0 التعليقات: